ಬೆಂಗಳೂರು:- ಕರ್ನಾಟಕದ ಹಲವೆಡೆ ಮಾರ್ಚ್ 23 ರಿಂದ ಮಳೆ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಿನಲ್ಲೂ ಮಳೆಯ ಆರ್ಭಟ ಜೋರಾಗಿರಲಿದೆ. ಮಾರ್ಚ್ 23ರಿಂದ ಬಿಸಿಲಿಗೆ ಕಾದು ಹೋಗಿರುವ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆಯಲಿದ್ದಾನೆ. ಜೋರು ಮಳೆಯಾಗುವ ಸಾಧ್ಯತೆ ಇದೆ.
ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಮಳೆಯ ಬಳಿಕ ತಾಪಮಾನದಲ್ಲೂ ಭಾರಿ ಏರಿಕೆ ಕಂಡಿದೆ. ಇದೀಗ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಧ್ಯಮ ಮಳೆಯಾಗುವ ಮುನ್ಸೂಚನೆ ನೀಡಿದೆ.