ಧಾರವಾಡ : ತಾಂತ್ರಿಕ ದೋಷದಿಂದ ಥಾರ್ ವಾಹನ ಬೆಂಕಿಗಾಹುತಿಯಾಗಿದೆ. ಧಾರವಾಡದ ಸವದತ್ತಿ ರಸ್ತೆಯಲ್ಲಿಯ ಕಾಶಿನಗರದ ಬಳಿ ಘಟನೆ ನಡೆದಿದೆ.
ಧಾರವಾಡದಿಂದ ಸವದತ್ತಿಗೆ ಹೊರಟಿದ್ದ ಮಹಿಂದ್ರಾ ಥಾರ್ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.