ಬೆಂಗಳೂರು: ಮೈಸೂರಿನಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಮಾಡಿಕೊಡುತ್ತಿಲ್ಲ ಎಂದು ಕಾಂಗ್ರೆಸ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಮಾಡಿಕೊಡುತ್ತಿಲ್ಲ. ಅರ್ಜಿ ಹಾಕಿ, ಹಣ ಕಟ್ಟಿದ ಮೇಲೆಯೂ ಖಾತೆ ಮಾಡಿಕೊಡುತ್ತಿಲ್ಲ.
Bank Deposit: ಯಾವೆಲ್ಲಾ ಬ್ಯಾಂಕುಗಳು ಠೇವಣಿ ಮೇಲೆ ಹೆಚ್ಚಿನ ಬಡ್ಡಿ ನೀಡುತ್ತವೆ ಗೊತ್ತಾ..? ಇಲ್ಲಿದೆ ನೋಡಿ
ಮೈಸೂರಿನಲ್ಲಿ ಈ ವಿಚಾರವಾಗಿ ಅಕ್ರಮಗಳು ನಡೆಯುತ್ತಿವೆ. ಖಾತೆ ಮಾಡಿಸಲು ಲಂಚ ಕೇಳುವ ಪರಿಸ್ಥಿತಿ ಬಂದಿದೆ. 30-35 ವರ್ಷಗಳಿಂದ ಖಾತೆ ಆಗಿಲ್ಲ. ಸಾಗುವಳಿ ಚೀಟಿ ಕೊಟ್ಟವರಿಗೆ ಕೂಡಲೇ ಖಾತೆ ಮಾಡಿಕೊಡಬೇಕು. ಖಾತೆ ಮಾಡಿ ಕೊಡುವುದಕ್ಕೆ ಒಂದು ಕಾಲ ಮಿತಿಯನ್ನು ಸರ್ಕಾರ ಮಾಡಬೇಕು ಎಂದರು.
ಮೈಸೂರಿನಲ್ಲಿ ಲಂಚ ಪಡೆಯುತ್ತಿದ್ದಾರೆ ಎಂಬ ಯತೀಂದ್ರ ಮಾತಿಗೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸಿಎಂ ಪುತ್ರರೇ ಸಾಗುವಳಿ ಚೀಟಿಗೆ ಖಾತೆ ಪಡೆಯಲು ಲಂಚ ಕೊಡಬೇಕು ಎಂದು ಹೇಳಿದ್ದಾರೆ. ಯಾರಿಗೆ ಲಂಚ ಕೊಡಬೇಕು ಅದನ್ನು ಸಚಿವರು ಹೇಳಬೇಕು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.