ಧಾರವಾಡ- ದೇಶದಲ್ಲಿ 2024ರ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಧಾರವಾಡದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಎಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಎಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಎಪ್ರಿಲ್ 22 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾಹಿತಿ ನೀಡಿದರು.
ವೈ- ಈ ಕುರತು ಧಾರವಾಡ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 7ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಧಾರವಾಡ ಲೋಕಸಭಾ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 1791386 ಮತದಾರರಿದ್ದಾರೆ. ಅದರಲ್ಲಿ ಪುರುಷರು 899246, ಮಹಿಳೆಯರು 892043 ಹಾಗೂ 97 ಜನ ತೃತೀಯ ಲಿಂಗಿ ಮತದಾರರಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಒಟ್ಟು 1660 ಮತಗಟ್ಟೆ ವ್ಯವಸ್ಥೆ ಮಾಡಲಾಗಿದೆ. 2014 ರಲ್ಲಿ ಶೇ.60.99 ರಷ್ಟು ಮತದಾನವಾಗಿತ್ತು. 2019ರಲ್ಲಿ ಶೇ.70.29 ರಷ್ಟು ಮತದಾನವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.73.45 ರಷ್ಟು ಮತದಾನವಾಗಿದೆ. ಪ್ರಸ್ತುತ 31,412 ಯುವ ಮತದಾರರಿದ್ದಾರೆ. ಅದರಲ್ಲಿ 10,783 ಯುವ ಮತದಾರರು ಸೇರ್ಪಡೆಯಾಗಿದ್ದಾರೆ. 20474 ವಿಕಲಚೇತನ ಮತದಾರರಿದ್ದು, 15833 ಜನ 83 ವರ್ಷ ಮೇಲ್ಪಟ್ಟ ಮತದಾರರು ನಮ್ಮ ಜಿಲ್ಲೆಯಲ್ಲಿದ್ದಾರೆ ಎಂದು ಹೇಳಿದರು.