ರಾಜಸ್ಥಾನ: ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಲಾಲೋಟ್ ಪ್ರದೇಶದಲ್ಲಿ ನಡೆದಿದೆ. ಭೂಪೇಂದ್ರ ಸಿಂಗ್ ಎಂಬ ಸಬ್ ಇನ್ಸ್ಪೆಕ್ಟರ್ 4 ವರ್ಷದ ಬಾಲಕಿಯನ್ನು ಮಧ್ಯಾಹ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವ ಮೊದಲು ಸ್ಥಳೀಯ ನಿವಾಸಿಗಳು ಥಳಿಸಿದ್ದಾರೆ. ಬಳಿಕ ರಾಹುವಾಸ್ ಠಾಣೆಗೆ ಮುತ್ತಿಗೆ ಹಾಕಿ,
ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್, ”ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಭೂಪೇಂದ್ರ ಸಿಂಗ್ ಮಧ್ಯಾಹ್ನ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸದ್ಯ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ”ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಅತ್ಯಾಚಾರ ಆರೋಪ ಮಾಡಿದ್ದಾರೆ. ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಂಗ್ ಹೇಳಿದರು.