ಇಂಡೋನೇಷ್ಯಾದ ಬಾಂದಾ ಸಮುದ್ರದಲ್ಲಿ ಇಂದು ಬೆಳಗ್ಗೆ (ಮಾ.10) 5.0 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಭೂಕಂಪದ ಕೇಂದ್ರಬಿಂದುವನ್ನು 7.30 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 129.27 ಡಿಗ್ರಿ ಪೂರ್ವ ರೇಖಾಂಶದಲ್ಲಿ ಮೇಲ್ವಿಚಾರಣೆ ಮಾಡಲಾಗಿದೆ ಎಂದು ಜಿಎಫ್ಜೆಡ್ ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ಮಾಹಿತಿ ನೀಡಿದೆ.
ದ್ವೀಪಸಮೂಹ ದೇಶ ಇಂಡೋನೇಷ್ಯಾ ‘ಪೆಸಿಫಿಕ್ ರಿಂಗ್ ಆಫ್ ಫೈರ್’ ಎಂದು ಕರೆಯಲ್ಪಡುವ ಸೂಕ್ಷ್ಮ ಭೂಕಂಪನ ವಲಯದಲ್ಲಿದೆ. ಈ ಘಟನೆಯಿಂದ ಯಾವುದೇ ಹಾನಿ ಉಂಟಾಗಿಲ್ಲ. ಇಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.