ತುಮಕೂರು: ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 1ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಕುಡಿದ ಅಮಲಿನಲ್ಲಿ ಯುವಕನೋರ್ವನಿಂದ ದುಷ್ಕೃತ್ಯವೆಸಗಿದ್ದಾನೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಮಧುಗಿರಿ ಮೂಲದ ಯುವಕನಿಂದ ಅತ್ಯಾಚಾರ ಮಾಡಲಾಗಿದೆ. ಈ ವೇಳೆ ಬಾಲಕಿ ಕಿರುಚಿದ ಕಾರಣ ಸ್ಥಳಿಯರು ದೌಡಾಯಿಸಿದ್ದು, ಬಾಲಕಿಯ ರಕ್ಷಣೆ ಮಾಡಲಾಗಿದೆ. ಸದ್ಯ ಬಾಲಕಿಯನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.