ದಾವಣಗೆರೆ: ಬ್ಯಾಂಕ್ ಮ್ಯಾನೇಜರ್ ಓರ್ವ ಸ್ನೇಹಿತನ ಹೆಸರಲ್ಲಿ ನಕಲಿ ಬಂಗಾರ ಅಡವಿಟ್ಟು ವಂಚನೆಗೈದಿದ್ದಾನೆ. ಜಗಳೂರು ಪಟ್ಟಣದಲ್ಲಿರುವ ಕೆಎಲ್ಎಂ ಆಕ್ಸಿವಾ ಫಿನ್ ವೆಸ್ಟ್ ಬ್ಯಾಂಕ್ ನಲ್ಲಿ ಈ ಘಟನೆ ನಡೆದಿದೆ. ಬರೋಬ್ಬರಿ 49 ಲಕ್ಷ ವಂಚನೆ ಮಾಡಿ ಎಸ್ಕೇಪ್ ಆಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಂಡ್ಯದಲ್ಲಿ 24 ಗಂಟೆಗಳ ರಕ್ತದಾನ ಶಿಬಿರ ; ಮೊದಲ ಬಾರಿಗೆ ರಕ್ತದಾನಗೈದ ಡಿಸಿ ಡಾ.ಕುಮಾರ್
ಜಗಳೂರು ಪಟ್ಟಣದ ಬ್ಯಾಂಕ್ ಮ್ಯಾನೇಜರ್ ಅರವಿಂದ್ ರೆಡ್ಡಿ ವಂಚನೆ ಮಾಡಿ ಪರಾರಿಯಾಗಿದ್ಧಾನೆ. ಕೆಎಲ್ಎಂ ಆಕ್ಸಿವಾ ಫಿನ್ ವೆಸ್ಟ್ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಅರವಿಂದ್ ರೆಡ್ಡ, ಕಳೆದ 2024ರ ನವೆಂಬರ್ ನಲ್ಲಿ ತನ್ನ 9 ಮಂದಿ ಸ್ನೇಹಿತರ ಹೆಸರಿನಲ್ಲಿ 84.5 ತೊಲ ನಕಲಿ ಬಂಗಾರ ಅಡವಿಟ್ಟಿದ್ದ. ಬರೋಬ್ಬರಿ 49 ಲಕ್ಷಕ್ಕೂ ಹೆಚ್ಚಿನ ಹಣ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ಕಣ್ಮರೆಯಾಗಿದ್ದಾನೆ. ಅಕ್ಸಿವಾ ಬ್ಯಾಂಕ್ನಿಂದ ಬಡ್ಡಿ ಹಣ ಕಟ್ಟುವಂತೆ ನೋಟೀಸ್ ಬಂದ ಬಳಿಕ ಪ್ರಕರಣ ಬಯಲಿಗೆ ಬಂದಿದ್ದು, ಕೂಡಲೇ ಬ್ಯಾಂಕ್ ಗೆ ಬಂದ ಆತನ ಸ್ನೇಹಿತರು ತಾವು ಯಾವುದೇ ಬಂಗಾರ ಅಡವಿಟ್ಟಿಲ್ಲ ಎಂದಿದ್ದಾರೆ. ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕ ವಸಂತ್ ಕುಮಾರ್ ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಕೆ ಕೈಗೊಂಡಿದ್ದಾರೆ.