ನ್ಯೂಯಾರ್ಕ್: ವಿಶ್ವ ಕ್ರಿಕೆಟ್ ಲೋಕವೇ ಕುತೂಹಲದ ಕಣ್ಣಿನಿಂದ ಕಾಯ್ತಿರೋ ಪಂದ್ಯದ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿಯಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ರಾತ್ರಿ 8ಕ್ಕೆ ಉಭಯ ತಂಡಗಳ ಮಧ್ಯೆ ನ್ಯೂಯಾರ್ಕ್ ಕ್ರೀಡಾಂಗಣದಲ್ಲಿ ಹಣಾಹಣಿ ನಡೆಯಲಿದ್ದು, ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಜಗತ್ತಿನ ಇತರೆ ಯಾವುದೇ ದೇಶಗಳ ನಡುವಿನ ಕ್ರಿಕೆಟ್ ಸಮರದಲ್ಲಿ ಈ ತೀವ್ರತೆ ಕಾಣಲು ಸಾಧ್ಯವೇ ಇಲ್ಲ. ಭಾರತ ಮತ್ತು ಪಾಕ್ ಪಂದ್ಯಗಳಲ್ಲಿ ಗೆಲುವಿನ ರೂವಾರಿಗಳು ಕ್ರಿಕೆಟಿನ ದೊಡ್ಡ ಹೀರೋಗಳಾಗಿ ಮೆರೆಯುತ್ತಾರೆ.
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
2024ರ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಅಮೆರಿಕ ತಂಡದ ವಿರುದ್ಧ ವಿರೋಚಿತ ಸೋಲಿಗೆ ತುತ್ತಾಗಿರುವ ಪಾಕಿಸ್ತಾನ ಟೀಂ ಇಂಡಿಯಾ ವಿರುದ್ಧ ಪುಟಿದೇಳುವ ತವಕದಲ್ಲಿದೆ. ಇನ್ನೂ ಐರ್ಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಭಾರತ ಪಾಕ್ ವಿರುದ್ಧ ಗೆದ್ದು ಸೂಪರ್-8 ಹಂತಕ್ಕೆ ಲಗ್ಗೆಯಿಡುವ ಉತ್ಸಾಹದಲ್ಲಿದೆ. ಆದ್ರೆ ಪಾಕ್ ಸೂಪರ್-8 ಪ್ರವೇಶಿಸಲು ಈ ಗೆಲುವು ನಿರ್ಣಾಯಕವೂ ಆಗಿದ್ದು, ಪಾಕ್ ತಂಡಕ್ಕೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
1 ಸೆಕೆಂಡ್ ಜಾಹೀರಾತಿಗೆ 4 ಲಕ್ಷ ರೂ.:
ಐಸಿಸಿ ಪಾಲಿಗೆ ಚಿನ್ನದ ಮೊಟ್ಟೆಯಾಗಿರುವ ಇಂಡೋ ಪಾಕ್ ಕದನದ ವೇಳೆ ಪ್ರಸಾರಗೊಳ್ಳುವ ಜಾಹೀರಾತಿನ ಬೆಲೆಯೂ ಭರ್ಜರಿಯಾಗಿ ಏರಿಕೆಯಾಗಿದೆ. ಪ್ರತಿ ಸೆಕೆಂಡ್ಗೆ 4 ಲಕ್ಷ ರೂ. ನಿಗದಿಪಡಿಸಲಾಗಿದೆ. ವಿಶ್ವಕಪ್ನ ಇತರೇ ಪಂದ್ಯಗಳಲ್ಲಿ ಪ್ರತಿ 10 ಸೆಕೆಂಡಿನ ಜಾಹೀರಾತಿಗೆ 6 ಲಕ್ಷ ರೂ. ಇದ್ದರೆ, ಭಾರತ ಮತ್ತು ಪಾಕ್ ಪಂದ್ಯದ ವೇಳೆ 10 ಸೆಕೆಂಡ್ ಜಾಹೀರಾತಿನ ಮೌಲ್ಯ 40 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.