ಕೊಪ್ಪಳ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ನಡೆಸಿದ್ದ ಸಂಧಾನ ವಿಫಲವಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿಯೇ ಕರಡಿ ಸಂಗಣ್ಣ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
Rama Navami 2024: ರಾಮ ನವಮಿ ಯಾವಾಗ.? ಪೂಜಾ ವಿಧಿ ವಿಧಾನ, ಮಹತ್ವ ತಿಳಿಯಿರಿ
ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಸಂಸದ ಕರಡಿ ಸಂಗಣ್ಣ ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡರು. ಪುತ್ರ ಅಮರೇಶ್ ಕರಡಿ ಯೊಂದಿಗೆ ಪಕ್ಷ ಸೇರ್ಪಡೆಯಾಗಿದ್ದು, ಸಚಿವ ಶಿವರಾಜ್ ತಂಗಡಗಿ ಮಾಜಿ ಸಚಿವ ಲಕ್ಷ್ಮಣ ಸವದಿ ಇಕ್ಬಾಲ್ ಅನ್ಸಾರಿ ಡಿಸಿಸಿ ಅಧ್ಯಕ್ಷ ಅಮರೇಗೌಡ ಬಯ್ಯಾಪುರ್ ಶಾಸಕ ರಾಘವೇಂದ್ರ ಹಿಟ್ನಾಳ್ ಬಸವರಾಜ್ ರಾಯರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.