ಇಸ್ಲಾಮಾಬಾದ್:- ಪಾಕಿಸ್ತಾನ ವಜರಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಅಜಮ್ ವಾರ್ಸಾಕ್ ಬೈಪಾಸ್ ರಸ್ತೆಯಲ್ಲಿರುವ ಮೌಲಾನಾ ಅಬ್ದುಲ್ ಅಜೀಜ್ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಮಾ. 14ರ ಶುಕ್ರವಾರದಂದು ಪ್ರಾರ್ಥನೆಯ ಸಮಯದಲ್ಲಿ ಮಸೀದಿಯ ಪ್ರವಚನ ಪೀಠದಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ
ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಗಾಯಾಳುಗಳನ್ನು ವಾನಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತನಿಖೆಯ ಅಂಗವಾಗಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಸಿವೆ