ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಹೋಟೆಲೊಂದಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್ ಮಾಡಿದ್ದಾರೆ. ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್ನಲ್ಲಿ ರಾಜಕಾರಣಿಗಳು,
Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..?
ಕ್ರಿಕೆಟರ್ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.ಕೂಡಲೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.