ವಿಜಯಪುರ: ಶಾಲೆ ಕಟ್ಟಡದಿಂದ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಆರ್. ಎಂ ಶಾಹಾ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಇಂಡಿ ತಾಲೂಕಿನ ಮಾವಿನಳ್ಳಿ ಗ್ರಾಮದ ಶಿವರಾಜ್ ರೋಡಗಿ (5) ಮೃತ ದುರ್ದೈವಿಯಾಗಿದ್ದು,ಶಿವರಾಜ್ ರೋಡಗಿ ಯು.ಕೆ.ಜಿ ಓದುತ್ತಿದ್ದು, ಬುಧವಾರ ಬೆಳಗ್ಗೆ ಎಂದಿನಂತೆ ಶಾಲೆಗೆ ಬಂದಿದ್ದ.
ಮೊದಲ ಮಹಡಿಯಿಂದ ಬರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೆಳಗಿದ್ದ ನೀರಿನ ಫೀಲ್ಟರ್ ಮೇಲೆ ರಭಸವಾಗಿ ಬಿದ್ದ ಪರಿಣಾಮ ಬಾಲಕನ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಲಕ ಬಿದ್ದ ವಿಷಯವನ್ನು ಶಾಲೆಯವರು ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆಸ್ಪತ್ರೆಗೆ ತರುವ ಮೊದಲೇ ಬಾಲಕ ಮೃತಪಟ್ಟಿದ್ದಾನೆ.
ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
ಬಾಲಕನ ಮೃತದೇಹವನ್ನು ಆಸ್ಪತ್ರೆಗೆ ತಂದು ಶಾಲಾ ಆಡಳಿತ ಮಂಡಳಿಯವರು ಪರಾರಿಯಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಸುರಕ್ಷಿತ ಕ್ರಮಕೈಗೊಳ್ಳದೆ ಇರುವುದೇ ಬಾಲಕನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಪ್ರಕರಣ ಮುಚ್ಚಿ ಹಾಕಲು ಶಾಲೆಯವರು ಯತ್ನಿಸುತ್ತಿದ್ದಾರೆ ಎಂದು ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ಇಂಡಿ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.