ಬೆಂಗಳೂರು:- ನೀರು ಹರಿಯಲು ಅಡ್ಡಿಯಾಗದಂತೆ ರಾಜಕಾಲುವೆ ಮೇಲೆ ಸೇತುವೆ ನಿರ್ಮಿಸಿದರೆ ಒತ್ತುವರಿಯಲ್ಲ ಎಂದು ಹೈಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ರಾಜಕಾಲುವೆಯ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಸೇತುವೆ ನಿರ್ಮಾಣ ಮಾಡಿ, ರಾಜಕಾಲುವೆ ಒಳಭಾಗದಲ್ಲಿ ಯಾವುದೇ ರೀತಿಯ ನಿರ್ಮಾಣ ಮಾಡದೆ, ನೀರು ಸರಾಗವಾಗಿ ಹರಿಯುವುದಕ್ಕೆ ಅಡ್ಡಿಯಾಗದಂತಿದ್ದರೆ, ಅದು ಒತ್ತುವರಿ ಮಾಡಿದಂತೆ ಆಗುವುದಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.