ಹಾಸನ : ಬೇಲೂರು ಪಟ್ಟಣದಲ್ಲಿ ಕಟ್ಟಡವೊಂದು ದಿಢೀರ್ ಕುಸಿದು ಅನಾಹುತ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಮರ್ ನಾಥ್ ಹಾಗೂ ನಜೀರ್ ಮೃತ ಪಟ್ಟಿವರು.
ಪ್ರಾಥಮಿಕ ಮಾಹಿತಿಯಂತೆ, ಪಾಳುಬಿದ್ದ ಈ ಕಟ್ಟಡದ ಕೆಳಗೆ ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರ ಮಾಡುತ್ತಿದ್ದರು. ದಿಢೀರ್ ಎಂದು ಈ ಕಟ್ಟಡ ಕುಸಿದು ಬಿದ್ದಿದೆ. ನಾಲ್ವರು ಮಹಿಳೆಯರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದರು.ಅದರಲ್ಲೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣವೇ ಪೊಲೀಸರಿಗೂ ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದು, ಬೇಲೂರು ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.