ಗಾಂಧಿನಗರ : ಖಾಸಗಿ ಬಸ್ ಕಂದಕಕ್ಕೆ ಉರುಳಿದಿದ್ದು, ಏಳು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಜನರು ಸ್ಥಿತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಈ ಅವಘ ನಡೆದಿದೆ. ಭಾನುವಾರ ಬೆಳಗ್ಗೆ 5:30ರ ಸುಮಾರಿಗೆ ಘಟನೆ ಸಂಭವಿಸಿದೆ.
ನಾಸಿಕ್ನಿಂದ ಗುಜರಾತ್ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಸಪುತಾರಾ ಘಾಟ್ನಲ್ಲಿ 200 ಅಡಿ ಆಳದ ಕಂದಕ್ಕೆ ಬಸ್ ಉರುಳಿದೆ. ಪರಿಣಾಮವಾಗಿ ಏಳು ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರು ಹಾಗೂ ಗಾಯಗೊಂಡ ಪ್ರಯಾಣಿಕರು ಮಧ್ಯಪ್ರದೇಶದವರು ಎಂದು ತಿಳಿದು ಬಂದಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.