ಬೆಂಗಳೂರು:- ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದ ಹಿನ್ನೆಲೆ, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾರೆ. ಕಾರಿನ ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆ ಜರುಗಿದೆ.
Muda Scam: ಮೈಸೂರು ಪಾಲಿಕೆ ಗುತ್ತಿಗೆ ನೌಕರ ವಜಾ! ಇಡಿ ವಿಚಾರಣೆ ಬೆನ್ನಲ್ಲೇ ಕ್ರಮ!
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗೋಪಸಂದ್ರ ಗೇಟ್ ಬಳಿ ಏಕಾಏಕಿ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಕಾರಿನ ಕೆಲವು ಭಾಗಗಳನ್ನು ಆವರಿಸಿದ್ದು, ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದಾನೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ಆನೇಕಲ್ನ ಗೋಪಸಂದ್ರದಿಂದ ಮುತ್ತಾನಲ್ಲೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಘಟನೆಯಿಂದಾಗಿ ದೊಮ್ಮಸಂದ್ರ ರಸ್ತೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿತ್ತು. ಇನ್ನು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.