ಬೆಂಗಳೂರು: ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಟೆಕ್ಕಿ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ (Whitefield Police Station) ವ್ಯಾಪ್ತಿಯ ಬಾಲಗತ್ತ್ ಜಂಕ್ಷನ್ನಲ್ಲಿ ನಡೆದಿದೆ. ಭಾನುವಾರ ರಾತ್ರಿ 10:30 ಸುಮಾರಿಗೆ ಘಟನೆ ನಡೆದಿದ್ದು,
ಒಡಿಶಾ ಮೂಲದ ಸಾಗರ್ (23) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ವರು ಟೆಕ್ಕಿಗಳಿಗಳಿಗೆ (Techie) ಸಣ್ಣಪುಟ್ಟ ಗಾಯಗಳಾಗಿವೆ. ನಾಲ್ವರೂ ಸಹ ಒಡಿಶಾ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಅಪಘಾತದಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.