ಬೆಂಗಳೂರು:- ಮಹಿಳೆ ಮೇಲೆ ಗ್ಯಾಂಗ್ ರೇಪ್ ಕೇಸ್ ಗೆ ಸಂಬಧಪಟ್ಟಂತೆ ಇಬ್ಬರು ಕಾಮುಕರನ್ನು ಅಂದರ್ ಮಾಡಲಾಗಿದೆ.
ಗಣೇಶ್, ಶರವಣ ಬಂಧಿತ ಆರೋಪಿಗಳಾಗಿದ್ದು, ಕೆ.ಆರ್ ಮಾರ್ಕೆಟ್ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.
ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಬಂದ ಮಹಿಳೆ ಯಲಹಂಕಕ್ಕೆ ತೆರಳಲು ಕೆ.ಆರ್ ಮಾರ್ಕೆಟ್ ಬಳಿ ಬಸ್ ಗಾಗಿ ಕಾಯುತ್ತಿರುವಾಗ ಘಟನೆ ನಡೆದಿದೆ
ಯಲಹಂಕ ಕಡೆಗೆ ಬಸ್ ಬರದ ಕಾರಣ ಬಸ್ ಎಲ್ಲಿ ಬರುತ್ತೆ ಅಂತಾ ದುಷ್ಕರ್ಮಿಗಳನ್ನ ವಿಚಾರಿಸಿದ್ದಾರೆ. ಬಸ್ ಬರುವ ಜಾಗ ತೋರಿಸತ್ತೇವೆ ಅಂತಾ ಬಸ್ ನಿಲ್ದಾಣದ ಸಮೀಪದಲ್ಲೇ ಇರುವ ಗೋಡೌನ್ ಸ್ಟ್ರೀಟ್ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರ ಮಾಡಿ ಮಹಿಳೆಯ ಮೇಲಿದ್ದ ಆಭರಣಗಳನ್ನ ದೋಚಿ ಪರಾರಿಯಾಗಿದ್ದರು. ಬಳಿಕ ಮಹಿಳೆ ದೂರು ಕೊಟ್ಟಿದ್ದರು. ದೂರಿನ ಅನ್ವಯ ಇದೀಗ ಅರೆಸ್ಟ್ ಮಾಡಲಾಗಿದೆ.