ಕಾನೂನುಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪಕ್ಕೆ ನಟಿ ಸೋನು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ
ಪೊಲೀಸ್ ವಾಹನದಲ್ಲಿ ತೆರಳುವುದಕ್ಕೂ ಮುನ್ನ ಮಾಧ್ಯಮಗಳ ಎದುರು ಸೋನು ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದಾರೆ. ಲೀಗಲ್ ಆಗಿ ತನಿಖೆ ನಡೆಯುತ್ತಿದೆ. ಏನೂ ತೊಂದರೆ ಇಲ್ಲ. ಒಂದು ಹುಡುಗಿಯನ್ನು ರಕ್ಷಣೆ ಮಾಡೋಕೆ ಅಂತ ನಾನು ಕರೆದುಕೊಂಡು ಬಂದಿದ್ದು. ಅವಳು ಈಗಲೂ ಆರಾಮಾಗಿ, ಸುರಕ್ಷಿತವಾಗಿ ಇದ್ದಾಳೆ ಎಂದು ಸೋನು ಗೌಡ ಹೇಳಿದ್ದಾರೆ. ಕೇಸ್ಗೆ ಸಂಬಂಧಪಟ್ಟಂತೆ ಅವರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಪೊಲೀಸರು ತನಿಖೆ ಮಾಡಲಿದ್ದಾರೆ. ಮಾರ್ಚ್ 25ರಂದು ಅವರನ್ನು ಕೋರ್ಟ್ಗೆ ಹಾಜರುಪಡಿಸಬೇಕಿದೆ. ನಿಯಮ ಪಾಲಿಸದೇ ಮಗು ದತ್ತು ಪಡೆದ ಆರೋಪದಲ್ಲಿ ಅವರು ಈಗ ಕಾನೂನು ಸಂಕಷ್ಟ ಎದುರಿಸಬೇಕಾಗಿದೆ.
ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ನಿನ್ನೆ ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಚರಣೆ ವೇಳೆ ಬಂಧನವಾಗಿತ್ತು.