ನವದೆಹಲಿ: ಕಳೆದ ಶನಿವಾರ ನವದೆಹಲಿಯ ರೈಲು ನಿಲ್ದಾಣದಲ್ಲಿ ಕಾಳ್ತುಳಿತ ಸಂಭವಿಸಿದ್ದು, ಪರಿಸ್ಥಿತಿ ಸದ್ಯ ನಿಯಂತ್ರಂದಲ್ಲಿದೆ. ಕಾಳ್ತುಳಿತದಲ್ಲಿ ಈವರೆಗೂ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿದೆ.
ಕೇಂದ್ರ ಸರ್ಕಾರವು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದು, ಗಾಯಾಳುಗಳ ಕುಟುಂಬಕ್ಕೆ ತಲಾ 2.5 ಲಕ್ಷ ಪರಿಹಾರ ಘೋಷಿಸಿದೆ. ಇನ್ನೊಂದೆಡೆ ಘಟನೆ ಕುರಿತು ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ರೈಲು ನಿಲ್ದಾಣದ ಪ್ರತಿಯೊಂದು ಸಿಸಿಟಿವಿ ಕ್ಯಾಮೆರಾಗಳಲ್ಲಿನ ಫೂಟೇಜ್ಗಳನ್ನು ಸಹ ಪರಿಶೀಲನೆ ನಡೆಸುತ್ತಿದ್ದಾರೆ.
ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ; ಅಧಿಕಾರಿಗಳು, ಪ್ರತ್ಯಕ್ಷ ದರ್ಶಿಗಳು ಹೇಳಿದ್ದೇನು..?
ಇನ್ನೂ ಘಟನೆಯ ಕುರಿತು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ನನಗೆ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕಾಲ್ತುಳಿತದಿಂದ ತೊಂದರೆಗೊಳಗಾದ ಎಲ್ಲರಿಗೂ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.