ಬೆಂಗಳೂರು: ಜೆ.ಪಿ ನಗರದ ಮೆಟ್ರೋ ಹಳಿಯಲ್ಲಿ ಕಪ್ಪು ಬೆಕ್ಕೊಂದು ಟ್ರ್ಯಾಕ್ಗೆ ಇಳಿದು ಸಾಕಷ್ಟು ಆತಂಕವನ್ನು ಸೃಷ್ಟಿಸಿದೆ. ಮೆಟ್ರೋ ಸಿಬ್ಬಂದಿ ಅಕ್ಷರಶಃ ಮೈ ಎಲ್ಲ ಕಣ್ಣಾಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಯಾರು ಯಾವಾಗ ಮೆಟ್ರೋ ಟ್ರ್ಯಾಕ್ಗೆ ಜಿಗಿದು ಬಿಡುತ್ತಾರೋ ಎಂಬ ಆತಂಕದಲ್ಲಿ ಇದ್ದಾರೆ. ಈ ನಡುವೆ ಜೆ.ಪಿ.ನಗರ ಮೆಟ್ರೋ ಹಳಿಗೆ ಬೆಕ್ಕುವೊಂದು ಜಿಗಿದಿದ್ದು, ಕ್ಷಣ ಕಾಲ ಆತಂಕವನ್ನು ಸೃಷ್ಟಿಸಿತ್ತು.
India’s richest person: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ
ಟ್ರ್ಯಾಕ್ನಲ್ಲಿ ಬೆಕ್ಕು ಇರುವುದನ್ನು ಕಂಡ ಪ್ರಯಾಣಿಕರು ಕೂಡಲೇ ಮೆಟ್ರೋ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಆದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಬೆಕ್ಕನ್ನು ರಕ್ಷಣೆ ಮಾಡಲು ಮುಂದಾಗಿಲ್ಲ. ಬದಲಿಗೆ ಟ್ರ್ಯಾಕ್ನಲ್ಲಿದ್ದ ಬೆಕ್ಕನ್ನು ಓಡಿಸಲು ಮುಂದಾಗಿದ್ದಾರೆ ಎಂದು ಟ್ವಿಟ್ಟರ್ (ಎಕ್ಸ್) ಮೂಲಕ ಆಕ್ರೋಶ ಹೊರಹಾಕಿದ್ದಾರೆ