ಶಿವಮೊಗ್ಗ:- ಪೋಷಕರೇ ನೀವು ಈ ಸುದ್ದಿ ನೋಡಲೇಬೇಕು. ಮಕ್ಕಳ ಮೇಲೆ ನೀವು ಎಷ್ಟು ನಿಗಾ ಇಟ್ಟರೂ ಸಾಲೋದಿಲ್ಲ.
ಇಲ್ಲೊಂದು ಕಡೆ ಪೋಷಕರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಪುಟ್ಟ ಮಗು ಅನ್ಯಾಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದೆ.
Mandya: ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳು – ಬಿಇಓ ಸಿ.ಎಚ್.ಕಾಳೀರಯ್ಯ!
ಮನೆಯಲ್ಲಿ ಆಟವಾಡುವ ವೇಳೆ ಈ ಅವಘಡ ಸಂಭವಿಸಿದ್ದು, ಒಂದೂವರೆ ವರ್ಷದ ಮಗುವೊಂದು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿದ ತಕ್ಷಣ ಉಸಿರಾಟದ ತೊಂದರೆ ಉಂಟಾಗಿದೆ. ತಕ್ಷಣವೇ ಪೋಷಕರು ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಚಿಕಿತ್ಸೆಗೆ ಫಲಿಸದೆ ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್(1.5) ಮೃತಪಟ್ಟ ಮಗುವಾಗಿದ್ದು, ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮಗು ಬಾಟಲ್ನ ಮುಚ್ಚಳ ನುಂಗಿದ್ದು, ಮುಚ್ಚಳ ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ.
ಮಗು ಬಾಟಲ್ನ ಮುಚ್ಚಳ ನುಂಗಿದ ತಕ್ಷಣ ಮಗುವಿನ ಉಸಿರಾಟದಲ್ಲಿ ಏರುಪೇರು ಉಂಟಾಗಿದ್ದು, ತಕ್ಷಣವೇ ಕುಟುಂಬದವರು ವಾಹನವೊಂದರಲ್ಲಿ ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ ಮಗು ಸಾವನ್ನಪ್ಪಿದೆ.