ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ODI ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಆಸಿಸ್ ವಿರುದ್ಧ ಭಾರತ ಹೀನಾಯ ಸೋಲು ಕಂಡಿದೆ.
ಮೊದಲು ಟಾಸ್ ಗೆದ್ದ ಆಸ್ಟ್ರೇಲಿಯಾ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಅದರನ್ವಯ ಬ್ಯಾಟಿಂಗ್ ಗೆ ಬಂದ ಭಾರತ ಆರಂಭದಲ್ಲೇ ಆಘಾತ ಅನುಭವಿಸಿತು. ಆಸ್ಟ್ರೇಲಿಯಾ ತಂಡದ ಬೌಲರ್ ಗಳ ದಾಳಿಗೆ ಅಕ್ಷರಸಹ ನಲುಗಿ ಹೋಗಿತ್ತು.
ಅದರನ್ವಯ 50 ಓವರ್ ಗಳಲ್ಲಿ 10 ವಿಕೆಟ್ ಗಳ ನಷ್ಟಕ್ಕೆ ಕೇವಲ 240 ಸುಲಭದ ಗುರಿ ನೀಡಿತ್ತು.
ಭಾರತ ತಂಡ ನೀಡಿದ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 43 ಓವರ್ ಗಳಲ್ಲಿ 4 ವಿಕೆಟ್ ಗಳ ನಷ್ಟಕ್ಕೆ 241 ರನ್ ಗಳಿಸುವ ಮೂಲಕ ಗೆದ್ದು ಬೀಗಿದೆ.
ಈ ಮೂಲಕ ಭಾರತ ತಂಡದ ಅಭಿಮಾನಿಗಳ ಆಸೆ ನುಚ್ಚು ನೂರಾಗಿದೆ. ಕಳೆದ ಹತ್ತು ಪಂದ್ಯಗಳಲ್ಲಿ ಚೆನ್ನಾಗಿ ಆರ್ಭಟಿಸಿದ್ದ ಟೀಮ್ ಇಂಡಿಯಾ ಕೊನೆಯ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿರುವುದು ಅಭಿಮಾನಿಗಳಲ್ಲಿ ಬೇಸರ ತರಿಸಿದೆ.