ಭಾರತಕ್ಕೆ ಮತ್ತೆ ಹೀನಾಯ ಸೋಲು ಕಂಡಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಆಸೀಸ್ ಲಗ್ಗೆ ಇಟ್ಟಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮುಕ್ತಾಯಗೊಂಡಿದ್ದು, ಅತಿಥೇಯ ಆಸ್ಟ್ರೇಲಿಯಾ ತಂಡ 3-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ. ಈ ಮೂಲಕ 10 ವರ್ಷಗಳ ಬಳಿಕ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಗೆದ್ದ ವಿಶೇಷ ಸಾಧನೆಯನ್ನೂ ಕಾಂಗರೂ ಪಡೆ ಮಾಡಿದೆ.
ಭಾನುವಾರ ಅಂತ್ಯಗೊಂಡ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನ ಆರು ವಿಕೆಟ್ಗಳಿಂದ ಸೋಲಿಸಿ 3-1 ಸರಣಿಯನ್ನ ಗೆದ್ದುಕೊಂಡಿದೆ. ಬರೋಬ್ಬರಿ 10 ವರ್ಷಗಳ ಬಳಿಕ ಟೀಮ್ ಇಂಡಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತನ್ನ ಪ್ರಾಬಲ್ಯವನ್ನು ಅಂತ್ಯಗೊಳಿಸಿದೆ. ಕೊನೆಯ ಬಾರಿ ಭಾರತ 2014-15ರಲ್ಲಿ ಟೆಸ್ಟ್ ಸರಣಿ ಸೋಲು ಕಂಡಿತ್ತು
ಪ್ರಸಕ್ತ ವರ್ಷ ಇಂಗ್ಲೆಂಡ್ನ ಪ್ರತಿಷ್ಠಿತ ಲಾರ್ಡ್ಸ್ ಮೈದಾನದಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟಕ್ಕಿಳಿಯಲಿದೆ. 2021-23ರ ಆವೃತ್ತಿಯಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಆಸ್ಟ್ರೇಲಿಯಾ ಟೀಂ ಇಂಡಿಯಾ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟಕ್ಕೇರಿತ್ತು.
ಸೂಪರ್ ಸಂಡೇ ಸಿಡ್ನಿಯಲ್ಲಿ ಪವಾಡವೇ ನಡೆಯಬಹುದು ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕಾದುಕುಳಿತಿದ್ದರು. ಒಂದಂತದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಆ ರೀತಿಯ ಆಸೆಯನ್ನೂ ಹುಟ್ಟಿಸಿದ್ದರು. ಆದ್ರೆ ಭಾರತದ ವಿರುದ್ಧ ಮತ್ತೆ ಸಿಡಿದ ಟ್ರಾವಿಸ್ ಹೆಡ್ ಮತ್ತು ಮೊದಲನೇ ಪಂದ್ಯದಲ್ಲೇ ತನ್ನ ಸಾಮರ್ಥ್ಯ ಸಾಬೀತು ಪಡಿಸಿದ ಬ್ಯೂ ವೆಬ್ಸ್ಟರ್ ಅದಕ್ಕೆ ಅವಕಾಶ ನೀಡದಂತೆ ಮಾಡಿದರು.
ಗೆಲುವಿಗೆ ಕೇವಲ 162 ರನ್ಗಳ ಗುರಿ ಪಡೆದಿದ್ದ ಆಸ್ಟ್ರೇಲಿಯಾ ತಂಡ ಆರಂಭದಿಂದಲೇ ಏಕದಿನ ಶೈಲಿಯಲ್ಲಿ ಆಕ್ರಮಣಕಾರಿ ಆಟಕ್ಕೆ ಇಳಿಯಿತು. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ವೇಗಿ ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿ ಆಸ್ಟ್ರೇಲಿಯಾ ತಂಡಕ್ಕೆ ಅನುಕೂಲವೇ ಆಯಿತು.