ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡವು ಇಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿತು.
ಇದೇವೇಳೆ ತಂಡವು ಹಸುಗಳ ಮಾಲೀಕರಿಗೆ ಧೈರ್ಯ ತುಂಬಿತು. ಸರಕಾರದ ನಿಷ್ಕ್ರಿಯತೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟ ಕುರಿತು ತಂಡವು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಗೋಪೂಜೆಯನ್ನೂ ನೆರವೇರಿಸಲಾಯಿತು.
Personal Loan: ಗಮನಿಸಿ.. ಪರ್ಸನಲ್ ಲೋನ್ ಪಡೆಯಲು RBI ನಿಂದ ಹೊಸ ರೂಲ್ಸ್.! ಬದಲಾವಣೆ ಏನು ಗೊತ್ತಾ..?
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಭಾಸ್ಕರ್ ರಾವ್, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಈ ತಂಡದಲ್ಲಿದ್ದರು.