ಹೈದರಾಬಾದ್:- ಕುಡಿದ ಮತ್ತಿನಲ್ಲಿ ಬಸ್ ಕಂಡಕ್ಟರ್ ಗೆ ಮಹಿಳೆ ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ಜರುಗಿದೆ.
ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ನಲ್ಲಿ ಮಹಿಳೆ ಕೆಟ್ಟದಾಗಿ ವರ್ತಿಸಿರುವ ಘಟನೆ ನಡೆದಿದೆ. ಬಸ್ ಕಂಡಕ್ಟರ್ ಮೇಲೆ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ದೈಹಿಕ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ.
ಕುಡಿದ ಮತ್ತಿನಲ್ಲಿ ಮಹಿಳೆ ವಾಗ್ವಾದದ ವೇಳೆ ಕಂಡಕ್ಟರ್ಗೆ ಒದ್ದಿದ್ದಾಳೆ. ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರೊಂದಿಗೆ ಮಹಿಳೆ ಅಸಭ್ಯವಾಗಿ ವರ್ತಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಯಾಣ ದರ ಅಥವಾ ಟಿಕೆಟ್ಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
TSRTC ಮಹಿಳೆಯ ವಿರುದ್ಧ ದೂರು ದಾಖಲಿಸಿದೆ ಮತ್ತು ಕಾನೂನು ಜಾರಿ ಸಂಸ್ಥೆಗಳು ಈ ವಿಷಯದ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿವೆ.