ರಾಯಚೂರು:- ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಸೂತಕದ ಛಾಯೆ ಆವರಿಸಿದ್ದು, ಥಿನ್ನರ್ ಸೇವಿಸಿ ಬಾಲಕ ದುರ್ಮರಣ ಹೊಂದಿದ್ದಾರೆ.
ಈ ಘಟನೆ ನಡೆದಿರೋದು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೆಕೊಟ್ನೇಕಲ್ನಲ್ಲಿ ಜರುಗಿದೆ. 3 ವರ್ಷದ ಶಿವಾರ್ಜುನ ನಾಯಕ್ ಬಾಲಕ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜಾತ್ರೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿದೀಗ ಸೂತಕದ ಛಾಯೆ ಆವರಿಸಿದೆ.
ಗ್ರಾಮದಲ್ಲಿ ಜಾತ್ರೆ ಹಿನ್ನೆಲೆ ಮನೆಗೆ ಪೇಂಟಿಂಗ್ ಮಾಡಲಾಗುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬಾಲಕ ಶಿವಾರ್ಜುನ ಥಿನ್ನರ್ ಸೇವಿಸಿದ್ದಾನೆ. ಈ ವೇಳೆ ಶಿವಾರ್ಜುನ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಸ್ಥಳೀಯ ಮಾನ್ವಿ ಖಾಸಗಿ ಆಸ್ಪತ್ರೆಗೆ ಪೋಷಕರು ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.