ಹರ್ಬ್ ಲೈಫ್ ಪರ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ ಕಾರಣಕ್ಕೆ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ನೆಟ್ಟಿಗರ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಹರ್ಬ್ ಲೈಫ್ ಪರ ಸೋಷಿಯಲ್ ಮೀಡಿಯಾದಲ್ಲಿ ಪ್ರಮೋಟ್ ಮಾಡಿರುವ ಕ್ರಿಸ್ಟಿಯಾನೋ “ಈ ಉತ್ಪನ್ನ ಪ್ರೋಟಿನ್, ನಾರು, ವಿಟಮಿನ್ ಮತ್ತು ಖನಿಜಗಳ ಸಂಪೂರ್ಣ ಮಿಶ್ರಣವಾಗಿದ್ದು ನಿಮ್ಮ ಆರೋಗ್ಯಕರ ಉಪಾಹಾರವಾಗಲಿದೆ’ ಎಂದು ಹೇಳಿದ್ದಾರೆ.
ಕ್ರಿಸ್ಟಿಯಾನೋ ಪೋಸ್ಟ್ ವೈರಲ್ ಆಗಿದ್ದು ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಉತ್ಪನ್ನ ಲಿವರ್ ಸಮಸ್ಯೆ ತಂದೊಡ್ಡಲಿದೆ ಎಂದು ಹೇಳಲಾಗಿತ್ತು ಎಂದು ನೆಟ್ಟಿಗರು ಹೇಳಿದ್ದಾರೆ. ಅಂದ ಹಾಗೆ ಹರ್ಬ್ ಲೈಫ್ ಸೇವನೆಯಿಂದ ಸಾಕಷ್ಟು ಸಮಸ್ಯೆಗಳು ಉಂಟಾಗಲಿವೆ ಎಂದು ಈ ಹಿಂದೆ ಸಾಕಷ್ಟು ಸುದ್ದಿಯಾಗಿತ್ತು.