ಹಾಸನ: ಕಾಡು ಹಂದಿ ದಾಳಿಗೆ ಓರ್ವ ರೈತ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜೇಗೌಡ (63) ಮೃತ ದುರ್ದೈವಿಯಾಗಿದ್ದು, ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿದ್ದಾರೆ. ರಾಜೇಗೌಡ, ಕಾಂತಮ್ಮ ಹಾಗೂ ನಂಜಮ್ಮ ಎಂಬುವವರು ಜಮೀನಿಗೆ ನೀರು ಹಾಯಿಸುತ್ತಿದ್ದಾಗ, ಕಾಡುಹಂದಿ ದಾಳಿ ಮಾಡಿದೆ.
Aishwarya Rai: ಗಂಡನ ಮನೆಯಿಂದ ಹೊರಬಂದ ಐಶ್ವರ್ಯಾ ರೈ..! ಬಿಗ್’ಬಿ ಮನೆಯಲ್ಲಿ ಅತ್ತೆ-ಸೊಸೆಯ ಬಿರುಕು
ಹಂದಿ ತಪ್ಪಿಸಿಕೊಳ್ಳಲು ಕಿರುಚಾಡಿದ್ದಾರೆ. ಆದರೆ ಕಾಡುಹಂದಿ ರಾಜೇಗೌಡರ ಮೇಲೆ ಎರಗಿ ಸಾಯಿಸಿದೆ. ಕಾಡುಹಂದಿ ದಾಳಿಯಿಂದ ಸ್ಥಳದಲ್ಲೇ ರಾಜೇಗೌಡ ಸಾವನ್ನಪ್ಪಿದ್ದಾರೆ. ಇತ್ತ ರಾಜೇಗೌಡನನ್ನು ಬಚಾವ್ ಮಾಡಲು ಹೋದ ಶಾಂತಮ್ಮ, ನಂಜಮ್ಮನಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳನ್ನು ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ಗೆ ರವಾನೆ ಮಾಡಲಾಗಿದೆ.