ಜ್ವರ ಬಂದ ಮಗುವಿಗೆ ಚಳಿಗಾಲದಲ್ಲಿ ಸೌತೆಕಾಯಿ ತಿನ್ನಿಸಬೇಡ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದು ತಂಗಿಯನ್ನು ಕೊಂದು ತಂದೆ ಹಾಗೂ ಅತ್ತಿಗೆಗೆ ಚಾಕುವಿನಿಂದ ಚುಚ್ಚಿ ಗಂಭೀರ ಸ್ಥಿತಿಗೆ ಕಾರಣವಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಈದ್ಗಾ ಮೊಹಲ್ಲಾ ವಾಸಿ ಸೈಯದ್ ಫರ್ಮಾನ್ ಎಂಬಾತನೆ ಸೌತೆಕಾಯಿ ತಿನ್ನಿಸುವ ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಂದು ತಂದೆ ಹಾಗೂ ಅತ್ತಿಗೆಗೆ ಚಾಕುವಿನಿಂದ ಇರಿದ ಪಾಪಿಯಾಗಿದ್ದಾನೆ.
Chanakya Niti: ನಿಮಗಿರುವ ಕಷ್ಟಗಳನ್ನು ಎದುರಿಸಲು ಚಾಣಕ್ಯ ಹೇಳಿದ ಈ 10 ವಿಷಯಗಳನ್ನು ನೆನಪಿಡಿ ಸಾಕು.!
ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ ಮೃತಪಟ್ಟರೆ, ಆರೋಪಿಯ ತಂದೆ ಸೈಯದ್(60) ಮತ್ತು ತಸ್ಲಿಮಾ ತಾಜ್(25) ಗಂಭೀರವಾಗಿ ಗಾಯಗೊಂಡು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ:
ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ 31 ವರ್ಷದ ಫರ್ಮಾನ್ ತನ್ನ ಅಣ್ಣನ ಮಗಳಿಗೆ ಸೌತೆಕಾಯಿ ತಿನ್ನಿಸುತ್ತಿದ್ದಾಗ ಸಹೋದರಿ ಐಮಾನ್ ಬಾನು, ಜ್ವರ ಬಂದಿರುವ ಮಗುವಿಗೆ ಸೌತೆಕಾಯಿ ಏಕೆ ತಿನ್ನಿಸುತ್ತಿದ್ದಿಯಾ ಎಂದು ಪ್ರಶ್ನಿಸಿದ್ದಾರೆ. ಇಷ್ಟೆ ಈ ದುರ್ಘಟನೆಗೆ ಕಾರಣವಾಯ್ತು. ಸೌತೆಕಾಯಿ ಮಾತಿಗೆ ಮಾತು ಬೆಳೆದು ಐಮಾನ್ ಅವರಿಗೆ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದಾನೆ. ಬಳಿಕ, ಜಗಳ. ಬಿಡಿಸಲು ಬಂದ ತಂದೆ ಸೈಯದ್ ಮತ್ತು ಅತ್ತಿಗೆತಸ್ಲೀಂ ತಾಜ್ ಗೂ ಕೂಡ ಇರಿದಿದ್ದಾನೆ. ಈ ಗಲಾಟೆಯಲ್ಲಿ ತಂದೆ ಸೈಯದ್ ಅವರ ಕೈ ಕೂಡಾ ಮುರಿದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೊಳ್ಲೇಗಾಲ ವಿಭಾಗದ ಡಿವೈಎಸಪಿ ಧರ್ಮೆಂದ್ರ, ಸರ್ಕಲ್ ಇನ್ಸ್ಪೆಕ್ಟರ್ ಶಿವಮಾದಯ್ಯ, ಪಿಸೈ ವರ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಂತರ ಆರೋಪಿ ಅಣ್ಣ ನೀಡಿರುವ ದೂರಿನ ಮೇಲೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಆರೋಪಿ ಸೈಯದ್ ಫರ್ಮಾನ್ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿ ಕ್ರಮಕೈಗೊಂಡಿದ್ದಾರೆ.