ಹಾಸನ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹಾಸನ ತಾಲೂಕಿನ ದೇವಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ರೈತ ದಿನೇಶ್ ಎಂಬುವವರಿಗೆ ಸೇರಿದ ಮನೆಯ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದು, ಶಾರ್ಟ್ ಸರ್ಕ್ಯೂಟ್ನಿಂ ಬೆಂಕಿ ಹೊತ್ತು ಉರಿದಿದೆ. ಈ ವೇಳೆ ದಿನೇಶ್ ಹಾಗೂ ಪತ್ನಿ ಜಮೀನು ಕೆಲಸಕ್ಕೆ ತೆರಳಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬಬ್ಬಂದಿ, ಬೆಂಕಿ ನಂದಿಸಿ ಭರ್ತಿಯಾಗಿದ್ದ ಸಿಲಿಂಡರ್ ಹೊರಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕನ್ನಡ ಮಾತಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ; ಮರಾಠಿ ಯುವಕರ ಗೂಂಡಾಗಿರಿ
ಇನ್ನೊಂದೆಡೆ ಅರಕಲಗೂಡು ತಾಲೂಕು ಕಚೇರಿ ಹಿಂಭಾಗದಲ್ಲಿರುವ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಪೋಟಕ್ಕೆ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.