ಚಾಮರಾಜನಗರ : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಚಾಮರಾಜನಗರ ಪಟ್ಟಣದ ಕೊಳದಬೀದಿಯಲ್ಲಿ ನಡೆದಿದೆ. ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಭಾಗಶ: ಮನೆ ಭಸ್ಮವಾಗಿದೆ. ಮನೆಯಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆಯಲ್ಲಿದ್ದ ಅಂಬಿಕಾ(35) , ಜಿ.ವಿಶ್ವನಾಥ್ (45) ಮಕ್ಕಳಾದ ರೋಹಿಣಿ (12) ವಿವೇಕ್ (10) ಶಕ್ತಿ ( 3 )ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಕಾಲದಲ್ಲಿ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಭಾರೀ ಅವಘಡವೊಂದನ್ನು ತಪ್ಪಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ
ನಾಲ್ ರೋಡ್ ಸಮೀಪದ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ನಾಲ್ ರೋಡ್ ಸಮೀಪದ ಅರಣ್ಯ ಪ್ರದೇಶದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ರೈತರು ಗಮನಿಸಿ ಅರಣ್ಯ ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕ ಅಗ್ನಿಶಾಮಕ ದಳದ ಠಾಣಾಧಿಕಾರಿ ಪ್ರಶಾಂತ್ ನಾಯ್ಕ್ ನೇತೃತ್ವದ ತಂಡ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.