ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿಯಾಗಿ ರಥೋತ್ಸವ ನೆರವೇರಿತು. ಶಾಂತವೀರ ಮಲ್ಲಿಕಾರ್ಜುನ ಸ್ವಾಮಿಜಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಸ್ತದಿಂದ ಧನುರ್ ಲಘ್ನದಲ್ಲಿ ರಥ ಎಳೆಯಲಾಯಿತು. ಈ ವೇಳೆ ಮಾದಪ್ಪನ ಸನ್ನಿಧಾನದಲ್ಲಿ ಉಘೇ ಮಾದಪ್ಪ ಘೋಷವಾಕ್ಯ ಮೊಳಗಿತು.
ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಗಣ ನೆರದಿತ್ತು. ರಥದ ಮುಂದೆ ಬಸವ ವಾಹನ, ಹುಲಿ ವಾಹನ ಹಾಗೂ ರುದ್ರಾಕ್ಷಿ ವಾಹನ ಸಾಗಿದವು. ರಾಜ್ಯದ ವಿವಿಧ ಜಿಲ್ಲೆಗಳಿಂದ ಪಾದಯಾತ್ರೆ ಮೂಲಕ ಆಗಮಿಸಿರುವ ಭಕ್ತಾಧಿಗಳು ರಥೋತ್ಸವಕ್ಕೆ ಸಾಕ್ಷಿಯಾದರು. ವರ್ಷದಲ್ಲಿ ಮೂರು ಬಾರಿ ಯುಗಾದಿ, ದೀಪಾವಳಿ, ಶಿವರಾತ್ರಿಯಂದು ಜಾತ್ರಾ ಮಹೋತ್ಸವ ನಡೆಯುತ್ತದೆ.