ಬಳ್ಳಾರಿ: ದೇಶಾದ್ಯಂತ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಬಳ್ಳಾರಿಯ ನಗರದ ವಿಮ್ಸ್ ಮೈದಾನದಲ್ಲಿ76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಣೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಇಲಾಖೆ ಸೇರಿದಂತೆ ಒಟ್ಟು 30 ತುಕಡಿಗಳ ಪಥ ಸಂಚಲನ ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸಚಿವರು ಸನ್ಮಾನಿಸಿದರು.
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೊಪ್ಪಳದ ತೊಗಲುಗೊಂಬೆ ಕಲಾವಿದೆ ಭೀಮವ್ವ ಶಿಳ್ಳಿಕ್ಯಾತರ
ಇದಕ್ಕೂ ಮುನ್ನ ಎಚ್.ಆರ್.ಗವಿಯಪ್ಪ ವೃತ್ತದಲ್ಲಿ ಬೃಹತ್ ಧ್ವಜಸ್ಥಂಭದ 150 ಅಡಿ ಧ್ವಜಾರೋಹಣ ನೆರವೇರಿಸಿದರು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್, ಗೈಡ್ಸ್ ಹಾಗೂ ಪೊಲೀಸರು ಪಥಸಂಚಲನದಲ್ಲಿ ಭಾಗವಹಿಸಿದ್ದರು.