ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ನೇ ತೃತ್ವದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು. ಎತ್ತಿನ ಗಾಡಿ, ಸೈಕಲ್ ಜಾಥಾ ಹಾಗೂ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆ ಬೋಧಿಸಿ ಅರಿವು ಮೂಡಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳು ಹಾಗು ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿ. ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅನುರಾಧ,
ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್ ಮುನಿರಾಜು, ತಾಲ್ಲೂಕ ಯೋಜನಾಧಿಕಾರಿ ರಾಮಾಂಜನೇಯ, ಸಹಾಯಕ ನಿರ್ದೇಶಕರು ರವಿಕುಮಾರ್, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಮ್ಯ,ಗ್ರಾ. ಪಂ.ಜನಪ್ರತಿನಿಧಿಗಳು, ಗ್ರಾ. ಪಂ.ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು..