ನಟ ದರ್ಶನ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಬೆನ್ನು ನೋವಿನ ಹಿನ್ನೆಲೆಯಲ್ಲಿ ಈ ಭಾರಿ ಬರ್ತಡೇ ಆಚರಿಸಿಕೊಳ್ಳುವುದಿಲ್ಲ ಎಂದು ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ. ಆದ್ರೆ ದರ್ಶನ್ ಇದೀಗ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹುಟ್ಟುಹಬ್ಬದ ದಿನವೇ (ಫೆ.16) ‘ಡೆವಿಲ್’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
‘ಕಾಟೇರ’ ಸಿನಿಮಾದ ಅದ್ಭುತ ಸಕ್ಸಸ್ ಬಳಿಕ ದರ್ಶನ್ ಅವರು ‘ಡೆವಿಲ್’ ಸಿನಿಮಾದ ಕೆಲಸ ಶುರು ಮಾಡಿದ್ದರು. ‘ಮಿಲನ’ ಪ್ರಕಾಶ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2024ರಲ್ಲೇ ಈ ಸಿನಿಮಾ ತೆರೆಕಾಣಬೇಕಿತ್ತು. ಆದರೆ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರಿಂದ ಶೂಟಿಂಗ್ ನಿಂತಿತ್ತು. ಇದೀಗ ಮತ್ತೆ ಶೂಟಿಂಗ ಆರಂಭವಾಗಿದ್ದು ದರ್ಶನ್ ಬರ್ತಡೇಗೆ ಟೀಸರ್ ರಿಲೀಸ್ ಆಗಲಿದೆ.
ದರ್ಶನ್ ಅವರು ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗುವುದಕ್ಕೂ ಮುನ್ನ ‘ಡೆವಿಲ್’ ಸಿನಿಮಾದ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಒಂದು ಟೀಸರ್ ಕೂಡ ಬಿಡುಗಡೆ ಮಾಡಲಾಗಿತ್ತು. ದರ್ಶನ್ ಜಾಮೀಮಿನ ಮೇಲೆ ಹೊರಗೆ ಬಂದ ಬಳಿಕ ಚಿತ್ರದ ಕೆಲಸಗಳಿಗೆ ಚಾಲನೆ ಈ ಸಿಕ್ಕಿದೆ. ಈ ವರ್ಷ ಅವರ ಹುಟ್ಟುಹಬ್ಬಕ್ಕೆ ಗಿಫ್ಟ್ ರೂಪದಲ್ಲಿ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದರಿಂದ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.