ಮೈಸೂರು:- ಮೋದಿ ಪರ ಹಾಡು ಬರೆದಿದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗಿದೆ.
ಹುಬ್ಬಳ್ಳಿ: ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಪ್ರತಿಭಟನೆ!
ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ರೋಹಿತ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ರೋಹಿತ್ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ.
ಅಲ್ಲದೇ ನರೇಂದ್ರ ಮೋದಿ ಹಾಡು ಮಾಡಿದ್ದೀಯಾ ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.
ರೋಹಿತನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇನ್ನು ಹಲ್ಲೆಗೊಳಗಾದ ಯುವಕ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬಂದು ಘಟನೆ ಸಂಬಂಧ ದೂರು ನೀಡಿದ್ದು, ಬಳಿಕ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ