ಲಕ್ನೋ: ವಿಶ್ವಕಪ್ ಟೂರ್ನಿಯಲ್ಲಿ (World Cup Cricket) ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ವೇಗಿ ಮೊಹಮ್ಮದ್ ಶಮಿ (Mohammed Shami) ಅವರ ಗ್ರಾಮದಲ್ಲೇ ಸಣ್ಣ ಕ್ರೀಡಾಂಗಣ (Minis Stadium) ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ (Uttar Pradesh) ಮುಂದಾಗಿದೆ. ಉತ್ತರ ಪ್ರದೇಶದ ಅಮ್ರೋಹಾ (Amroha) ಜಿಲ್ಲೆಯ ಸಹಾಸ್ಪುರ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಕ್ರೀಡಾಂಗಣದ ಕಾಮಗಾರಿ ಆರಂಭಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ.
ಮೊಹಮ್ಮದ್ ಶಮಿ ಅವರ ಹಳ್ಳಿಯಾದ ಸಹಸ್ಪುರ ಅಲಿನಗರದಲ್ಲಿ ಮಿನಿ ಕ್ರೀಡಾಂಗಣವನ್ನು ನಿರ್ಮಿಸಲು ನಾವು ಪ್ರಸ್ತಾಪಿಸುತ್ತಿದ್ದೇವೆ. ಇದರಲ್ಲಿ ಮಿನಿ ಕ್ರೀಡಾಂಗಣದ ಜೊತೆಗೆ ತೆರೆದ ಜಿಮ್ ಸೇರಿದೆ ಎಂದು ಜಿಲ್ಲಾಧಿಕಾರಿ ರಾಜೇಶ್ ತ್ಯಾಗಿ ಹೇಳಿದ್ದಾರೆ. ಸರ್ಕಾರದಿಂದ ಘೋಷಣೆ ಹೊರ ಬಿದ್ದ ಬೆನ್ನಲ್ಲೇ ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ ಪಕ್ಷದ ರಾಜ್ಯಸಭಾ ಸದಸ್ಯ ಜಯಂತ್ ಸಿಂಗ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ,
VIDEO | "We are proposing the construction of a mini stadium in Mohammed Shami's village (Sahaspur Alinagar), which will include an open gym alongside the mini stadium," says DM Amroha Rajesh Tyagi. pic.twitter.com/c69TWMD8Si
— Press Trust of India (@PTI_News) November 17, 2023
ಶಮಿ ತವರಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಸಹಾಯ ಮಾಡಲು ನನ್ನ ಸಂಸದರ ನಿಧಿಯನ್ನು ನೀಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಈ ಬಾರಿಯ ವಿಶ್ವಕಪ್ನಲ್ಲಿ ಶಮಿ ಆಡಿದ್ದು ಕೇವಲ 6 ಪಂದ್ಯವಾಡಿ 23 ವಿಕೆಟ್ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. 3 ಬಾರಿ ಶಮಿ 5 ವಿಕೆಟ್ಗಳ ಗೊಂಚಲು ಪಡೆದಿದ್ದಾರೆ. ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು.