ಹಾಸನ : ಹಾಸನದಲ್ಲಿ ಇತ್ತೀಚಿಗೆ ಕಾಡಾನೆ ಉಪಟಳ ಹೆಚ್ಚಾಗಿದ್ದು, ಇದೀಗ ಅರಣ್ಯ ಇಲಾಖೆ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸುತ್ತಿದೆ. ಭಾನುವಾರದಿಂದಲೇ ಕಾರ್ಯಾಚರಣೆ ಆರಂಭಗೊಂಡಿದ್ದು, ಮೊದಲ ದಿನದ ಕಾರ್ಯಾಚರಣೆ ಯಶಸ್ವಿಗೊಂಡಿದೆ.
ಸತತ ನಾಲ್ಕು ಗಂಟೆಗಳ ನಂತರ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಬೇಲೂರು ತಾಲೂಕಿನ ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್ನಲ್ಲಿ ಸೆರೆ ಸಿಕ್ಕ ಕಾಡಾನೆ ಸೆರೆ ಸಕ್ಕಿದೆ. ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ಪುಂಡಾನೆಗಳನ್ನು ಗುರುತಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮೊದಲಿಗೆ ವೈದ್ಯರು ಒಂಟಿ ಸಲಗಕ್ಕೆ ಅರವಳಿಕೆ ಚುಚ್ಚುಮದ್ದು ನೀಡಿದ್ದು, ಈ ವೇಳೆ ಅರವಳಿಕೆ ಚುಚ್ಚುಮದ್ದು ನೀಡುತ್ತಿದ್ದಂತೆ ಜೊತೆಗಿದ್ದ ಕಾಡಾನೆ ಜೊತೆ ಓಡಾಡಿದೆ. ಒಂದು ಗಂಟೆಗೂ ಹೆಚ್ಚು ಕಾಲ ಎಲ್ಲೆಂದರಲ್ಲಿ ಓಡಾಡದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟು ಎರಡು ಕಾಡಾನೆಗಳನ್ನು ಬೇರ್ಪಡಿಸಿದ್ದಾರೆ. ನಂತರ ಒಂಟಿಸಲಗ ಕುಸಿದು ಬಿದಿದ್ದು,ಕಾಡಾನೆಯನ್ನು ಸೆರೆಹಿಡಿಯಲಾಗಿದೆ.