ಹಾಸನ : ಬೈಕ್ಗೆ ಲಾರಿ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಹೊಸ ಬಸ್ ನಿಲ್ದಾಣ ಸಮೀಪ ಘಟನೆ ನಡೆದಿದೆ.
ಆಕಾಶ್ (22), ಶಂಕರ (45) ಮೃತ ದುರ್ದೈವಿಗಳಾಗಿದ್ದು, ಇಬ್ಬರು ಸಕಲೇಶಪುರದಿಂದ ವಳಲಹಳ್ಳಿ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸದಿದ್ದಾರೆ.
ಬೆಂಕಿ ತಗುಲಿ ಜಾನುವಾರುಗಳಿಗೆ ಶೇಖರಿಸಿಟ್ಟಿದ್ದ ಮೇವಿನ ಬಣವೆಗಳು ಬೆಂಕಿಗಾಹುತಿ
ಇನ್ನೊಂದೆಡೆ ಹುಬ್ಬಳ್ಳಿ ತಾಲೂಕಿನಲ್ಲಿ ಬಹುದೊಡ್ಡ ದುರಂತವೊಂದು ತಪ್ಪಿದೆ. ಕೆಎಸ್ಆರ್ ಟಿಸಿ ಬಸ್ ಪಾಟಾ ಕಟ್ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್ನಲ್ಲಿದ್ದ 15 ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಸಮೀಪ ಹುಬ್ಬಳ್ಳಿಯಿಂದ ಸವದತ್ತಿ ಕಡೆ ಹೊರಟಿದ್ದ ಬಸ್ ಬಸ್ ಪಲ್ಟಿಯಾಗಿದ್ದು, ಹಿರೇಕುಂಬಿಯ ದೇವಸ್ಥಾನಕ್ಕೆ ಹೊರಟಿದ್ದ ಕೆಲವರು ಸೇರಿ 15 ಮಂದಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.