ತುಮಕೂರು: ಡಿವೈಡರ್’ಗೆ ಲಾರಿ ಡಿಕ್ಕಿಯಾಗಿ ಮತ್ತೊಂದು ಲಾರಿಗೆ ಡಿಕ್ಕಿಯಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಟೈಯರ್ ಗಳನ್ನ ತುಂಬಿಕೊಂಡು ಹೋಗ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದಿದ್ದು ಬಳಿಕ ಮತ್ತೊಂದು ಲಾರಿಗೆ ಡಿಕ್ಕಿಯಾಗಿ ಅಪಘಾತ ಹೊಂದಿದೆ.
ತುಮಕೂರು ಕಡೆಯಿಂದ ಶಿರಾದ ಕಡೆ ಹೋಗ್ತಿದ್ದ ಲಾರಿ ಹಾಗೆ ಶಿರಾ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಮತ್ತೊಂದು ಲಾರಿ ಎರಡು ಒಂದಕ್ಕೊಂದು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಭಯಂಕರ ಆಕ್ಸಿಡೆಂಟ್ ಆಗಿ ಟೈಯರ್ ತುಂಬಿಕೊಂಡು ಹೋಗ್ತಿದ್ದ ಲಾರಿ ಚಾಲಕ ಸಾವನ್ನಪ್ಪಿದ್ದಾನೆ. ಅದೃಷ್ಟಾವಶಾತ್ ಇನ್ನೊಂದು ಲಾರಿ ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಿಶೀಲನೆ ನಡೆಯುತ್ತಿದೆ.