ಗಾಂಧಿನಗರ: ಲಾರಿ ಪಲ್ಟಿಯಾಗಿ ರಸ್ತೆಬದಿ ಕೆಲಸ ಮಾಡುತ್ತಿದ್ದ ಒಂದು ಮಗು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಗುಜರಾತ್ನ ಬನಸ್ಕಂತ ಜಿಲ್ಲೆಯ ಥರಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಮರಳು ತುಂಬಿದ್ದ ಲಾರಿ ಪಲ್ಟಿಯಾಗಿದೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾರಣ ತಿರುವಿನಲ್ಲಿ ವಾಹನ ಚಲಾಯಿಸಲು ಪ್ರಯತ್ನಿಸಿದ್ದ ವೇಳೆ ಲಾರಿ ಪಲ್ಟಿಯಾಗಿದೆ. ಸದ್ಯ ಮರಳಿನಡಿ ಸಿಲುಕಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಮೃತರೆಲ್ಲರೂ ಸಹ ದಾಹೋದ್ ಜಿಲ್ಲೆಯವರಾಗಿದ್ದು, ಇಲ್ಲಿಗೆ ಕೆಲಸಕ್ಕೆ ಬಂದಿದ್ದರು ಎನ್ನಲಾಗುತ್ತಿದೆ.