ಜೈಪುರ: ರಾಜ್ಯ ವಿಧಾನಸಭೆ ಚುನಾವಣೆ (Rajasthan Assembly Elections) ಹಿನ್ನೆಲೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆ (Manifesto) ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ರಾಜಸ್ಥಾನದ ಜನರಿಗೆ 7 ಗ್ಯಾರಂಟಿ (Guarantee) ಘೋಷಿಸಿದ್ದು ಜೊತೆಗೆ ಜಾತಿ ಸಮೀಕ್ಷೆ ನಡೆಸಿ ಬಿಡುಗಡೆ ಮಾಡುವ ಭರವಸೆ ನೀಡಲಾಗಿದೆ.
ಕರ್ನಾಟಕದ ಮಾದರಿಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ವಾರ್ಷಿಕ 10,000 ರೂ. ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಗೊಧನ್ ಯೋಜನೆಯಡಿ ಸರ್ಕಾರವು ಹಸುವಿನ ಸಗಣಿ ಪ್ರತಿ ಕೆಜಿಗೆ 2 ರೂ.ಯಲ್ಲಿ ಖರೀದಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್/ಟ್ಯಾಬ್ಲೆಟ್ ವಿತರಿಸಲಾಗುವುದು ಎಂದು ಹೇಳಿದೆ. ಚಿರಂಜೀವಿ ವಿಪತ್ತು ಪರಿಹಾರ ವಿಮೆ ಯೋಜನೆಯಡಿ ಪ್ರತಿಯೊಬ್ಬರಿಗೂ 15 ಲಕ್ಷ ರೂ. ವಿಮೆ ನೀಡಲಾಗುವುದು,
ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
500 ರೂ.ಯಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆ, ರಾಜ್ಯದ ಪ್ರತಿಯೊಂದು ಮಗುವಿಗೂ ಇಂಗ್ಲಿಷ್ ಶಿಕ್ಷಣ ನೀಡಲಾಗುವುದು, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವ ಭರವಸೆ ಕಾಂಗ್ರೆಸ್ ನೀಡಿದೆ. ಈ ಗ್ಯಾರಂಟಿ ಹೊರತಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ನಡೆಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪಂಚಾಯತ್ ಮಟ್ಟದಲ್ಲಿ ನೇಮಕಾತಿ ಮತ್ತು ಇತರ ಕಲ್ಯಾಣ ಯೋಜನೆಗಳಿಗೆ ಹೊಸ ಯೋಜನೆ ಭರವಸೆ ನೀಡಿತು.