ಧಾರವಾಡ: ಧಾರವಾಡ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ನಿನ್ನೆ ಸಂಜೆ ಬಸ್ ನ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕ್ಕೊಂಡಿದ್ದು, ಈ ದೃಶ್ಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನೂ ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಬಸ್ಸಿನ ಹಿಂಬದಿ ಚಕ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಪ್ರಯಾಣಿಕನಂತೆ ನಿಂತು ಬಸ್ ಬಂದ ತಕ್ಷಣ ಬಸ್ ನ ಚಕ್ಕಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕ್ಕೊಂಡಿದ್ದಾನೆ. ಈ ಘಟನೆ ಕಂಡು ನೋಡಿ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಈ ಸಂಬಂಧ ಧಾರವಾಡ ಉಪನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.