ಬೆಂಗಳೂರು: ಮದ್ಯಪಾನ ಮಾಡಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ಚಾಕು ಇರಿದು ವ್ಯಕ್ತಿಯ ಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರಂನ ರಾಮಚಂದ್ರಪುರದಲ್ಲಿ ತಡರಾತ್ರಿ ನಡೆದಿದೆ. ವೆಂಕಟೇಶ್ (45), ಕೊಲೆಯಾದ ದುರ್ದೈವಿಯಾಗಿದ್ದು, ವಾಟರ್ ಫಿಲ್ಟರ್ ಟ್ಯಾಂಕ್ ಬಳಿಯ ಖಾಲಿ ಜಾಗದಲ್ಲಿ ಮದ್ಯಪಾನ ಮಾಡ್ತಿದ್ದ ಪವನ್ ಕುಮಾರ್ ಮತ್ತು ನಂದಾ, ಈ ವೇಳೆ ನೀವಿನ್ನು ಚಿಕ್ಕ ವಯಸ್ಸಿನವರು ಮದ್ಯಪಾನ ಮಾಡಬೇಡಿ ಎಂದು ಬುದ್ದಿ ಮಾತು ಹೇಳಿದ್ದಾರೆ.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್
ಇದೇ ಒಂದು ಮಾತಿನಿಂದಲೇ ಕೆಂಡಾಮಂಡಲವಾದ ಯುವಕ, ವ್ಯಕ್ತಿಗೆ ಚಾಕು ತೆಗೆದುಕೊಂಡು ಇರಿದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವೆಂಕಟೇಶ್ನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ವಿದ್ಯಾರಣ್ಯಪುರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.