ಕೋಲಾರ:- ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ – ರಾಜ್ಯ ಸರ್ಕಾರದಿಂದ ಸಿಐಡಿ ವಿಚಾರಣೆ ಆದೇಶ ವಾಪಸ್!
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳಿನಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಮಗಳು ಗರ್ಭಿಣಿಯಾಗಿದ್ದಾಳೆ. ಯುವತಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದಾಗ ತಂದೆಯ ವಿಕೃತ ಕಾಮ ಬೆಳಕಿಗೆ ಬಂದಿದೆ.
ಅಪ್ಪಯ್ಯಪ್ಪಗೆ ಮೂರು ಹೆಣ್ಣು ಒಂದು ಗಂಡು ಮಗು ಇದ್ದು, ತಾಯಿ ಇಲ್ಲದ ಮಕ್ಕಳನ್ನು ತಾನೇ ನೋಡಿಕೊಳ್ಳುತ್ತಿದ್ದ. ಮೊದಲ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಕೊಟ್ಟಿದ್ದಾನೆ. ಆದ್ರೆ, 20 ವರ್ಷದ ಮೂರನೇ ಮಗಳ ಮೇಲೆ ತನ್ನ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಮಗಳು ಎನ್ನುವುದನ್ನು ನೋಡದೇ ನಿರಂತರವಾಗಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಯುವತಿ ಗರ್ಭಿಣಿಯಾಗಿದ್ದಾಳೆ.
ಮಗಳ ಮೇಲೆ ನಿರಂತರವಾಗಿ 5 ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಬಳಿಕ ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದು, ಆಗ ವೈದ್ಯರು ಪರೀಕ್ಷೆ ನಡೆಸಿದ ವೇಳೆ ಯುವತಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.