ಬೆಂಗಳೂರು:- ಬಹು ನಿರೀಕ್ಷಿತ ಬೆಂಗಳೂರು ಹವಾಮಾನ ಕ್ರಿಯಾ ಯೋಜನೆಯು ಶೀಘ್ರವೇ ಅನುಷ್ಠಾನಗೊಳ್ಳಲಿದ್ದು, ಈ ಕುರಿತಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿ.ಎಂ.ಆರ್.ಸಿ.ಎಲ್ ವ್ಯವಸ್ತಾಪಕ ನಿರ್ದೇಶಕರಾದ ಅಂಜುಂ ಫರ್ವೇಜ್ , ಸಿ-40 ಸಂಸ್ಥೆಯ ರೀಜಿನಲ್ ಡೈರೆಕ್ಟರ್(ಸೌತ್ & ವೆಸ್ಟ್ ಏಶಿಯಾ) ಶೃತಿ ನಾರಾಯಣ್, WRI ಇಂಡಿಯಾದ ಎಕ್ಸಿಕ್ಯೂಟಿವ್ ಪ್ರೋಗ್ರಾಂ ಡೈರೆಕ್ಟರ್ ಜಯದಿಂದ್ವ ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳು ಹಾಜರಿದ್ದರು.