ಮೈಸೂರು:- ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ ಕೇಸ್ ಗೆ ಸಂಬಂಧಿಸಿದಂತೆ ಓರ್ವ ದುರ್ಮರಣ ಹೊಂದಿದ್ದಾರೆ.
ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಓರ್ವ ಯುವಕ ಮೃತಪಟ್ಟಿದ್ದಾನೆ. ಸದ್ದಾಂ ಮೃತ ಯುವಕ. ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರಿಂದ ರಕ್ಷಣಾ ಕಾರ್ಯ ಮುಂದುವರೆದಿದೆ
ಮೈಸೂರಿನ ಹೃದಯ ಭಾಗ, ಜೆಎಲ್ಬಿ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜು ಕಟ್ಟಡಕ್ಕೆ ನೂರು ವರ್ಷದ ಇತಿಹಾಸವಿದೆ. ಮೂರು ವರ್ಷಗಳ ಹಿಂದೆ ಇದೆ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿರಲಿಲ್ಲ. ನಂತರ ಜಾಗವನ್ನು ಖಾಲಿ ಮಾಡಲಾಗಿತ್ತು. ಅಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿರಲಿಲ್ಲ. ಇತ್ತೀಚಿಗೆ ಸರ್ಕಾರ ಆ ಕಟ್ಟಡ ಪುನರ್ ನಿರ್ಮಾಣಕ್ಕೆ ಅನುದಾನ ಸಹ ನೀಡಿತ್ತು. ಕಿಟಕಿ ಸರಳು ಸೇರಿದಂತೆ ಹಲವು ವಸ್ತುಗಳನ್ನು ಅಲ್ಲಿಂದ ತೆರವುಗೊಳಿಸಲು ಗುತ್ತಿಗೆ ನೀಡಲಾಗಿತ್ತು. ಅದರಂತೆ ಸದ್ದಾಂ ಸರಿ 14 ಜನ ಕಟ್ಟಡದಲ್ಲಿದ್ದ ಕಿಟಕಿ ಸೇರಿದಂತೆ ವಿವಿಧ ಉಪಕರಣಗಳನ್ನು ತೆಗೆಯುವ ಕೆಲಸ ಮಾಡುತ್ತಿದ್ದರು. ಈ ವೇಳ ಅವಘಡ ಸಂಭವಿಸಿದೆ.