ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ.
ಕೋಟೆನಾಡಲ್ಲಿ ಲೋಕಸಭಾ ಚುನಾವಣೆ: ಕಾಂಗ್ರೆಸ್ ಗೆಲುವಿಗೆ ಸುರ್ಜೇವಾಲ ರಣತಂತ್ರ!
ನಾಳೆ ಮಧ್ಯಾಹ್ನ 3.30 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಿಕ್ಕಬಳ್ಳಾಪುರ ಆಗಮಿಸಲಿದ್ದಾರೆ. ಮೋದಿಯವರ ಕಾರ್ಯಕ್ರಮದ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸುಮಾರು 50 ಎಕರೆ ಜಮೀನಿನಲ್ಲಿ ವಿಶಾಲವಾದ ಪೆಂಡಲ್ ಹಾಗೂ ಹೆಲಿಪ್ಯಾಡ್ಗಳ ನಿರ್ಮಾಣ ಮಾಡಲಾಗಿದೆ. ಇನ್ನು ಆರ್ಆರ್ಆರ್ ಚಲನಚಿತ್ರದ ಟ್ರೈಲರ್ ರಿಲೀಸ್ ಮಾಡಿದ್ದ ಸ್ಥಳದಲ್ಲೇ ಮೋದಿಯವರ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದೆ. ಸುಮಾರು 50 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, 30ಕ್ಕೂ ಹೆಚ್ಚು ಶೌಚಾಲಯ, ಬೃಹತ್ ಎಲ್ಇಡಿ ಪರದೆಗಳು, ಪೆಂಡಲ್, ಪಾರ್ಕಿಂಗ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಕೇಂದ್ರವಲಯ ಐಜಿಪಿಯವರ ನೇತೃತ್ವದಲ್ಲಿ ಎಸ್ಪಿ, ಎಎಸ್ಪಿ ಸೇರಿದಂತೆ ಭದ್ರತೆಗಾಗಿ 450 ಪೊಲೀಸರಿಂದ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.